ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಮೇಗೌಡರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
— Basavaraj S Bommai (@BSBommai) August 26, 2022