ಹಾವೇರಿ : ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸಿಕೊಡಬೇಕೆಂದು ಕೋರಿ ಸಿಎಂ ಬಸವರಾಜ ಬೊಮ್ಮಾಯಿಗೆ ಸಹಾಯಕ ಪ್ರಾಧ್ಯಾಪಕ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದಾರೆ.
Big news: ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಆಕಾಂಕ್ಷಿಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸಿಕೊಡಬೇಕೆಂದು ಕೋರಿ ಮನವಿ ಸಲ್ಲಿಸಲಾಯಿತು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ತುಮಕೂರಿಗೆ ಭೇಟಿ ನೀಡಿದ್ದ ವೇಳೆಯೂ ಆಕಾಂಕ್ಷಿಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ನಡೆಸಿಕೊಡಬೇಕೆಂದು ಮನವಿ ಮಾಡಿದ್ದಾರೆ.