ಚೆನ್ನೈ: ಇಂದು ಚೆನ್ನೈನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ(Indigo flight)ಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಈ ಅನಾಮಧೇಯ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ.
ಕರೆ ಬಂದ ನಂತ್ರ, ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆಯೇ ಎಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಾಮಧೇಯ ಕರೆ ಬಂದ ಪರಿಣಾಮ, ಸುಮಾರು 160 ಪ್ರಯಾಣಿಕರೊಂದಿಗೆ ಬೆಳಿಗ್ಗೆ 7.20 ಕ್ಕೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದೊಳಗೆ ಭದ್ರತಾ ಏಜೆನ್ಸಿಗಳು ಶೋಧ ನಡೆಸುತ್ತಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ, ಕರೆ ಮಾಡಿದವರ ಪತ್ತೆಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Big news: ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12
BIG NEWS: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ
Big news: ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್