ತುಮಕೂರು : ತಿಗಳ ಸಮುದಾಯದ ಆರಾಧ್ಯ ದೈವ ಅಗ್ನಿ ಬನ್ನಿಗರಾಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ತಿಗಳ ಕ್ಷತ್ರಿಯ ಸಮಾಜದ ಜಾಗೃತಿ ಸಮಾವೇಶ ಹಾಗೂ ಗುರುವಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ತಿಗಳ ಸಮುದಾಯದ ಆರಾಧ್ಯ ದೈವ ಅಗ್ನಿ ಬನ್ನಿಗರಾಯ ಜಯಂತಿಯನ್ನು ಪ್ರತಿ ವರ್ಷವೂ ಸರ್ಕಾರದಿಂದಲೇ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIG NEWS: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ತಿಗಳ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅಗ್ನಿಬನ್ನಿರಾಯ, ತಿಗಳರ ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹೆಚ್ಚಿನ ಅಧ್ಯಯನ ಕೈಗೊಳ್ಳಲು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಕೇಂದ್ರ ತೆರೆಯಲಾಗುವುದು ಎಂದರು.