ಬೆಂಗಳೂರು: ರಾಜ್ಯದ ಒಟ್ಟು 10 ಲಕ್ಷ ಯುವಕರಿಗೆ ಸೂಕ್ತ ಉದ್ಯೋಗ ಪಡೆಯಲು ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಶುಕ್ರವಾರ ಬೆಂಗಳೂರಿನಲ್ಲಿ ತಿಳಿಸಿದರು.
ನಗರದ ರಾಮನಾರಾಯಣ ಚೆಲ್ಲರಾಂ ಕಾಲೇಜಿನಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ‘‘ಪ್ರಗತಿ ಪಥ’’ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 200 ಕ್ಕೂ ಹೆಚ್ಚು ಕಂಪನಿಗಳು ಮುಂದೆ ಬಂದಿವೆ ಮತ್ತು 5,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ ಆನ್ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ ಎಂದರು.
ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರಕಾರ ಸಿದ್ಧವಾಗಿದೆ. ಹೀಗಾಗಿ ಪದವಿ ಕೋರ್ಸುಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ವಿವರಿಸಿದರು.
ಸೂಕ್ತ ವಿದ್ಯಾಭ್ಯಾಸ, ತಕ್ಕ ಅರ್ಹತೆ ಮತ್ತು ಆಧುನಿಕ ಕೌಶಲ್ಯಗಳು ಇದ್ದರೆ ಅವಕಾಶಗಳಿಗೆ ಬರವಿಲ್ಲ. ವಾಸ್ತವವಾಗಿ ಉದ್ಯಮರಂಗವು ಬಯಸುತ್ತಿರುವಷ್ಟು ನುರಿತ ಮಾನವ ಸಂಪನ್ಮೂಲವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ನುಡಿದರು.
ನೆಪಮಾತ್ರದ ಪದವಿಗಳನ್ನು ಬಿಟ್ಟು ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ. ಈಗಾಗಲೇ ವಿನೂತನ ಮತ್ತು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣವೇ ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು.
BIG NEWS: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ
Big news: ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್
Big news: ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12