ದೆಹಲಿ: ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ(NV Ramana) ಅವರು ಆಗಸ್ಟ್ 26ರಂದು ನಿವೃತ್ತರಾದ ಬಳಿಕ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್(Justice UU Lalit) ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತೀಯ ಸಂವಿಧಾನದ ಪ್ರಕಾರ, ರಾಷ್ಟ್ರಪತಿ ಭವನದಲ್ಲಿ ನಡೆದ ಸಂಕ್ಷಿಪ್ತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯುಯು ಲಲಿತ್ ಅವರಿಗೆ
ಪ್ರಮಾಣ ವಚನ ಬೋಧಿಸಿದರು.
#WATCH | President Droupadi Murmu administers the oath of Office of the Chief Justice of India to Justice Uday Umesh Lalit at Rashtrapati Bhavan pic.twitter.com/HqayMJDwBB
— ANI (@ANI) August 27, 2022
ಸಮಾರಂಭದಲ್ಲಿ ಉಪಾಧ್ಯಕ್ಷ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಉಪಸ್ಥಿತರಿದ್ದರು. ನ್ಯಾಯಮೂರ್ತಿ ಲಲಿತ್ ಅವರ ಹಿಂದಿನ ನ್ಯಾಯಮೂರ್ತಿ ಎನ್ ವಿ ರಮಣ ಕೂಡ ಉಪಸ್ಥಿತರಿದ್ದರು.
ಯುಯು ಲಲಿತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕೇವಲ ಮೂರು ತಿಂಗಳು ಕೆಲಸ ನಿರ್ವಹಿಸಲಿದ್ದಾರೆ. ನವೆಂಬರ್ 8 ರಂದು ಅವರು ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ.
Big news: ಉದ್ಯೋಗ ಪಡೆಯಲು 10 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ತರಬೇತಿ: ಸಚಿವ ಅಶ್ವಥ್ ನಾರಾಯಣ್
BIGG NEWS : ಬೆಂಗಳೂರಿನಲ್ಲಿ ಪ್ರಿಯಕರನ ಕಿಡ್ನ್ಯಾಪ್ ಮಾಡಿಸಿದ ಪ್ರಿಯತಮೆ : ಇಬ್ಬರು ಯುವತಿಯರು ಸೇರಿ 8 ಜನರ ಬಂಧನ