ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಿದ್ದಗಂಗಾ ಮಠದ ಸನ್ನಿಧಿಯಲ್ಲೇ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
BIGG NEWS : ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯ ಅವಾಂತರ : ಉದ್ಘಾಟನೆ ಮುನ್ನವೇ ʻ ಕುಂಬಳಗೋಡು ಟೋಲ್ ಮುಳುಗಡೆ ʼ
ಸಿದ್ದಗಂಗಾ ಮಠದ ಸನ್ನಿಧಿಯಲ್ಲೇ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಎಂಬಿಬಿಎಸ್ ತರಗತಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ.
ತುಮಕೂರಿನ ಸಿದ್ದಗಂಗಾ ಮಠ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಲಾಗಿತ್ತು. ಈ ಅರ್ಜಿ ಮತ್ತು ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಲಾಗಿದೆ. ಬಳಿಕ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ. ಅಲ್ಲದೇ ಪ್ರಥಮ ಬ್ಯಾಚ್ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ದಗಂಗಾ ಮಠದ ಆಡಳಿತ ಮಂಡಳಿಗೆ ಪತ್ರ ಬರೆದಿದೆ.