ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ ನಲ್ಲಿ 2022-23 ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಅನುಮತಿ ನೀಡಿದೆ.
BIGG NEWS : ದುಬೈನಿಂದ ಇಂಡಿಗೋ ವಿಮಾನಕ್ಕೆ ʻ ಹುಸಿ ಬಾಂಬ್ ಬೆದರಿಕೆ ಕರೆ ʼ : ಪತ್ತೆಗಾಗಿ ಪೊಲೀಸರಿಂದ ತನಿಖೆ ಆರಂಭ
ಪ್ರಸಕ್ತ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ಸೆಪ್ಟೆಂಬರ್ ನಲ್ಲಿ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ಪೂರ್ವಭಾವಿಯಾಗಿ ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಪರಿಶೀಲಿಸಿ ನಿಖರ ಮಾಹಿತಿಯನ್ನು ಸೆ.2 ರೊಳಗೆ ಅಪ್ ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇನ್ನು ಶಿಕ್ಷಕ ಮಿತ್ರದಲ್ಲಿ ಅಪ್ ಲೋಡ್ ಮಾಡುವ ವಿವರಗಳನ್ನು ಮಾತ್ರ ವರ್ಗಾವಣೆ ಪ್ರಕ್ರಿಯೆಗೆ ಪರಿಗಣಿಸಲಾಗುತ್ತದೆ. ತಂತ್ರಾಂಶಕ್ಕೆ ಸಂಬಂಧಿಸಿದಂತೆ ಗೊಂದಲಗಳಿದ್ದಲ್ಲಿ ವಿವರಗಳನ್ನು karonlineserviceshelp@gmail.com ಗೆ ಸಲ್ಲಿಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
BIGG NEWS: ಮಧ್ಯಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ; ಮದುವೆಯ ಸಂಭ್ರಮದಲ್ಲಿದ್ದ ಐವರು ಸಾವು