ಚಿತ್ರದುರ್ಗ : ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಅಪ್ರಾಪ್ರ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿಗಳು ನಡೆಸುತ್ತಿರುವ ಷಡ್ಯಂತ್ರ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠದ ವಿರೋಧಿ ಶಕ್ತಿಗಳು ಆಸೆ, ಆಮಿಷದಿಂದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ಮಕ್ಕಳನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಅವರ ಮುಖಾಂತರ ಶ್ರೀಗಳ ವಿರುದ್ಧ ದೂರು ನೀಡಿದ್ದಾರೆ. ಆದರೆ ಸ್ವಾಮೀಜಿಗಳ ವಿರುದ್ಧ ಆರೋಪ ಸುಳ್ಳು ಎಂದು ಹೇಳಿದ್ದಾರೆ.
BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಮುರುಘಾಮಠದ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದೆ. ಮೈಸೂರು ಒಡನಾಡಿ ಸಂಸ್ಥೆ ಮೂಲಕ ಬಾಲಕಿಯರು ದೂರು ನೀಡಿದ್ದಾರೆ.