ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಕೋಟ್ಯಾಂತರ ಬಡವರು ರಾಷ್ಟ್ರದಲ್ಲಿ ಅಸ್ತಿತ್ವ ಕಂಡುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದ ಮೋದಿ@20 ಪುಸ್ತಕ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಕೇಂದ್ರ ಸಚಿವರು, “ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತ್ರ ದೇಶದಲ್ಲಿ ಭಾರಿ ಬದಲಾವಣೆ ಕಂಡುಬಂದಿದೆ ಎಂದು ಜನರು ನನಗೆ ಹೇಳಿದ್ದಾರೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದ್ರೆ, ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ಕೋಟ್ಯಂತರ ಬಡವರು ತಾವು ಈ ರಾಷ್ಟ್ರದಲ್ಲಿ ಅಸ್ತಿತ್ವವನ್ನು ಹೊಂದಿದ್ದೇವೆ ಎನ್ನುತ್ತಿದ್ದಾರೆ” ಎಂದು ಹೇಳಿದರು.