ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಡೀಸೆಲ್ ಸಹಾಯಧನಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದ ರೈತ ಶಕ್ತಿ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ಪಾಟೀಲ್, ರೈತರು ಕೃಷಿ ಚಟುವಟಿಕೆಯಲ್ಲಿ ಯಂತ್ರಗಳಿಗೆ ಡೀಸೆಲ್ ಹೆಚ್ಚಾಗಿ ಬಳಸುವುದರಿಂದ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ 5 ಎಕೆರೆಗೆ ,1250 ರೂ. ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ರೈತ ಶಕ್ತಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ ನಲ್ಲಿ ಚಾಲನೆ ಸಿಗಲಿದೆ. ಪ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡ ರೈತರೂ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.