ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನ ಬಾಗೇವಾಡಿ ನಿವಾಸಿ ಹಾಗೂ ಮಹಿಳಾ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ರಚನಾಳನ್ನು ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ.
ಇಬ್ಬರು ಇನ್ಸ್ಪೆಕ್ಟರ್ ಗಳ ಕೊಲ್ಡ್ ವಾರ್: ಗೋ ಸಾಗಣೆ ಕೇಸ್ನಲ್ಲಿ ಮಾಡದ ತಪ್ಪಿಗೆ ಪೇದೆ ಸಸ್ಪೆಂಡ್
545 ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ರಚನಾ ಹೆಸರು ಕೇಳಿ ಬಂದಿತ್ತು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು.
BREAKING NEWS : ಚಿತ್ರದುರ್ಗದಲ್ಲಿ ಭೀಕರ ದುರಂತ : ಭಂಡಾರದ ನೀರು ಕುಡಿದ ಇಬ್ಬರು ಮಕ್ಕಳು ಅಸಹಜ ಸಾವು
ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ರಚನಾ ಎಫ್ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಳು. ಇದೀಗ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.