ಬೆಂಗಳೂರು : ಉತ್ತರ ಕರ್ನಾಟದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮಹಾಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
BIG NEWS: ತೆಲಂಗಾಣ ಕಾಂಗ್ರೆಸ್ ನಾಯಕ ʻಎಂಎ ಖಾನ್ʼ ಪಕ್ಷಕ್ಕೆ ರಾಜೀನಾಮೆ: ಕಾರಣ ಇಷ್ಟೇ…?
ಉತ್ತರ ಕರ್ನಾಟಕದ ಹಾವೇರಿ, ಧಾರವಾಡ, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಎಕರೆಗಟ್ಟಲೆ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿವೆ. ಹಾವೇರಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ವಿರೂಪಾಕ್ಷಪ್ಪ ಹಾಗೂ ರುದ್ರಗೌಡ ಎಂಬುವರ ಮನೆಗಳು ಕುಸಿದಿವೆ.
ರಾಯಚೂರು ಜಿಲ್ಲೆಯಲ್ಲಿ ಹಲವಡೆ ಧಾರಾಕಾರ ಮಳೆಯಾಗುತ್ತಿದ್ದು,ನೀರಿನ ರಭಸಕ್ಕೆ ನಾರಯಣ ಬಲದಂತೆ ಕಾಲುವೆ ಒಡೆದಿರುವ ಘಟನೆ ಸಿರವಾರ ತಾಲೂಕಿ ಕುರುಕುಂದ ಬಳಿ ನಡೆದಿದೆ. 9ಎ ಬಲದಂಡೆ ಕಾಲುವೆಯಲ್ಲಿ ಹೆಚ್ಚಿನ ನೀರಿನ ಒತ್ತಡದಿಂದ ಕಾಲುವೆ ಒಡೆದು ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.