ಬೆಂಗಳೂರು : ಭಾರತ- ಚೀನಾ ಫ್ರೆಂಡ್ಶಿಪ್ ಅಸೋಸಿಯೇಷನ್ ನಗರದ ಚಿತ್ರಕಲಾ ಪರಿಷತ್ನಲ್ಲಿ ಆಯೋಜಿಸಿದ್ದ ‘ಚೀನಾದ ಆಂತರಿಕ ವ್ಯವಹಾರಗಳಲ್ಲಿ ಅಮೆರಿಕದ ಬಂಡವಾಳಶಾಹಿಗಳ ಹಸ್ತಕ್ಷೇಪ’ಕುರಿತ ವಿಚಾರ ಸಂಕಿರಣದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದರಿಂದ ಕಾರ್ಯಕ್ರಮವೇ ರದ್ದು ಮಾಡಲಾಗಿದೆ.
SHOCKING NEWS: ʻಅಗ್ನಿವೀರ್ʼ ಪರೀಕ್ಷೆಯಲ್ಲಿ ಫೇಲ್: ಮನನೊಂದು ಉತ್ತರಾಖಂಡ್ನ ಯುವಕ ಆತ್ಮಹತ್ಯೆಗೆ ಶರಣು
ಚೀನಾ ಪರವಾದ ವಿಚಾರ ಸಂಕಿರಣದಲ್ಲಿ ಅತಿಥಿಗಳನ್ನಾಗಿ ಆಹ್ವಾನಿಸಿದ್ದ ವಿಚಾರದ ಕುರಿತಂತೆ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ದಾಂತಿಕವಾಗಿ ನನ್ನ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.
India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಕಂಡು ಆಶ್ಚರ್ಯವಾಯಿತು.
ಸೈದ್ದಾಂತಿಕವಾಗಿ ನನ್ನ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ. pic.twitter.com/ls0vGBmaaj
— Siddaramaiah (@siddaramaiah) August 27, 2022