ನವದೆಹಲಿ : ಕರ್ನಾಟಕದ ಹಿಜಾಬ್ ವಿವಾದ (Hijab Controversy) ದೇಶಾದ್ಯಂತ ಭಾರೀ ಚರ್ಚೆಗೊಳಗಾಗಿತ್ತು. ಇದೀಗ ಸುಪ್ರೀಂಕೋರ್ಟ್ ನಲ್ಲಿ ನಾಳೆ ಹಿಜಾಬ್ ಅರ್ಜಿ ವಿಚಾರಣೆ ನಡೆಯಲಿದೆ.
ನಾಳೆ ಸುಪ್ರೀಂಕೋರ್ಟ್ ಜಸ್ಟೀಸ್ ಹೇಮಂತ್ ಗುಪ್ತಾ ಹಾಗೂ ಜಸ್ಟೀಸ್ ಸುಧಾಂಶು ದುಲಿಯಾ ಪೀಠದಲ್ಲಿ ಹಿಜಾಬ್ ಕುರಿತ ಅರ್ಜಿ ವಿಚಾರಣೆ ನಡೆಯಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ಸುಪ್ರೀಂಕೋರ್ಟ್ ನಲ್ಲಿ ಹಿಜಾಬ್ ಕುರಿತ ಅರ್ಜಿ ವಿಚಾರಣೆ ನಡೆಯಲಿದೆ.
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಾಳೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.
BIGG NEWS : ಇಂದು ‘ಮನ್ ಕಿ ಬಾತ್’ನ 92ನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಮಾತುಕತೆ | Mann Ki Baat