ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ( KPCC Office ) ಭಾನುವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ( BBMP Election ) ಪ್ರಣಾಳಿಕೆ ಸಮಿತಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಸಂಬಂಧ ವಿವಿಧ ವಿಷಯಗಳನ್ನು ಕಾಂಗ್ರೆಸ್ ಪಕ್ಷದ ( Congress Party ) ಮುಖಂಡರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದು ‘ವಾಹನ ಚಾಲನೆ’ ಮಾಡೋ ಪ್ರತಿಯೊಬ್ಬರು ತಪ್ಪದೇ ಓದಬೇಕಾದ ಸುದ್ದಿ.! Highway Hypnosis
ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಬಿಎಂಪಿ ಮೀಸಲಾತಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ಮುಖಂಡರು ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸರ್ಕಾರ ಬಿಬಿಎಂಪಿ ಚುನಾವಣೆಯ ಸಂಬಂಧ ಸಿದ್ಧತೆಯಲ್ಲಿ ಹಲವು ಅಕ್ರಮ ನಡೆಸಿದೆ ಎಂಬುದಾಗಿ ಕಿಡಿಕಾರಿದ್ದಾರೆ ಎನ್ನಲಾಗಿದೆ.
ಇದಲ್ಲದೇ ಬಿಬಿಎಂಪಿಯ ಚುನಾವಣೆಯಲ್ಲಿ ರಾಜ್ಯ ಸರ್ಕಾರ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿದೆ. ಕಾಂಗ್ರೆಸ್ ಪಕ್ಷದಿಂದ ಇದನ್ನು ಸಮರ್ಥವಾಗಿ ಎದುರಿಸೇಬಕು. ಆ ನಿಟ್ಟಿನಲ್ಲಿ ಯಾವೆಲ್ಲಾ ತಂತ್ರಗಾರಿಕೆ ಹೆಣೆಯಬೇಕು ಎನ್ನುವ ಬಗ್ಗೆಯೂ ಕೈ ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
BIG NEWS: ನಾಳೆ ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ | Hijab Row
ಯಾವುದೇ ಸಂದರ್ಭದಲ್ಲಾದರೂ ಬಿಬಿಎಂಪಿ ಚುನಾವಣೆ ಘೋಷಣೆಯಾಗಬಹುದು. ಆ ಚುನಾವಣೆಯನ್ನು ಒಟ್ಟಾಗಿ ಎದುರಿಸೋದಕ್ಕೆ ಸಿದ್ಧರಾಗುವ ನಿಟ್ಟಿನಲ್ಲಿ ಎಲ್ಲಾ ತಯಾರಿಯನ್ನು ನಡೆಸುವ ನಿರ್ಧಾರವನ್ನು ಕಾಂಗ್ರೆಸ್ ಮುಖಂಡರು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಭೆಯಲ್ಲಿ ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಮಯೂರು ಜಯಕುಮಾರ್, ವಿಷ್ಣುನಾಥನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್, ಮಾಜಿ ಸಚಿವ ಕೆ.ಜೆ. ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.