ನವದೆಹಲಿ: ಕಳೆದ ಮೂರು ವರ್ಷಗಳಿಂದ ಪೂರ್ಣಾವಧಿ ಅಧ್ಯಕ್ಷರಿಲ್ಲದೇ ನಡೆಯುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ( Congress Party ) ಕಾಯಂ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ( CWC) ಘೋಷಣೆ ಮಾಡಿದೆ. ಅದರಂತೆ ಸೆಪ್ಟೆಂಬರ್ 24ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 17ರಂದು ಮತದಾನ ನಡೆದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ.
BIG NEWS: 6 ವರ್ಷ ಶಿಕ್ಷೆಯಾಗುವ ಕೇಸ್ ನಲ್ಲಿ ವಿಧಿ ವಿಜ್ಞಾನ ಪರೀಕ್ಷೆ ಕಡ್ಡಾಯ – ಕೇಂದ್ರ ಸರ್ಕಾರ
ಈ ಕುರಿತಂತೆ ನಿನ್ನೆ ನಡೆದಂತ ಸಿ ಡಬ್ಲ್ಯುಸಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿರುವಂತ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವೀಡಿಯೋ ಸಂವಾದದ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
30 ನಿಮಿಷಗಳ ಕಾಲ ನಡೆದಂತ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲು ನಿರ್ಧರಿಸಲಾಯಿತು. ಅದರಂತೆ ಸೆಪ್ಟೆಂಬರ್ 22ರಂದು ಚುನಾವಣೆಗಾಗಿ ಅಧಿಸೂಚನೆ ಹೊರ ಬೀಳಲಿದೆ. ಸೆ.24ರಿಂದ ಸೆ.30ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಕೆಯಾದ್ರೇ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಚುನಾವಣೆಯ ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.