ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ, ಬಂಗಾಳಕೊಲ್ಲಿಯಲ್ಲಿನ ಸುಳಿಗಾಳಿ ಸೃಷ್ಠಿಯ ಪರಿಣಾಮ ರಾಜ್ಯದಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ಮೂರು ನಾಲ್ಕು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ.
ಈ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬೀ ಸಮುದ್ದದ ಕೇರಳ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಪರಿಣಾಮದಿಂದಾಗಿ ಕರ್ನಾಟಕದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇಂದಿನಿಂದ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
BIG NEWS: ರಾಮಮಂದಿರ ಕೆಲಸ ಶೇ.40ರಷ್ಟು ಪೂರ್ಣ: 2023ರ ಡಿಸೆಂಬರ್ ಗೆ ಭಕ್ತರಿಗೆ ಮುಕ್ತ
ಇಂದು ಮತ್ತು ನಾಳೆ ಗದಗ, ಕಲಬುರ್ಗಿ, ಹಾವೇರಿ, ಧಾರವಾಡ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಮಂಗಳವಾರದ ನಂತ್ರ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ಮುಂದುವರೆಯುವು ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತವು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.