ಬೆಂಗಳೂರು: ಚಿತ್ರದುರ್ಗಗ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬಾಲಕಿಯರನ್ನು ವಿಚಾರಣೆ ನಡೆಸಿದಂತ ಪೊಲೀಸರು, ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರನ್ನು ಸಿಎಂ ಬೊಮ್ಮಾಯಿ ( CM Bommai ) ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ಆಫ್ರಿಕನ್ ಮಹಿಳೆಯರಿಂದ ಕಿರಿಕ್: ಪೊಲೀಸರ ಮೇಲೆ ಹಲ್ಲೆಗೂ ಯತ್ನ.?
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮುರುಘ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಸಂಬಂಧ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಬಿಎಸ್ ಯಡಿಯೂರಪ್ಪ ಅವರಿಂದ ಪ್ರಕರಣ ಸಂಬಂಧ ಸಲಹೆಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.
BIG NEWS: ದೇಶಾದ್ಯಂತ ಕೋವಿಡ್ ಕೇಸ್ ಹೆಚ್ಚಳ: ಇಂದು 7,591 ಮಂದಿಗೆ ಕೊರೋನಾ ಪಾಸಿಟಿವ್ | India Covid19 Report
ಅಂದಹಾಗೇ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಳಿಕ ತನಿಖೆ ಆರಂಭಿಸಿದ್ದಂತ ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು.
ಏಷ್ಯಾಕಪ್ನಲ್ಲಿ ಪಾಕ್ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ