ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಪೋಲಿಸರು ಸದ್ಯ ಹಾವೇರಿಯ ಬಂಕಾಪುರದಲ್ಲಿ ಪೋಲಿಸರ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಖಾಕಿ ಸರ್ಪಗಾವಲಿನಲ್ಲಿ ಚಿತ್ರದುರ್ಗಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಚಿತ್ರದುರ್ಗ ಪೋಲಿಸರು ಅವರನ್ನು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಅವರನ್ನು ಪೋಲಿಸರು ಯಾವೆಲ್ಲ ರೀತಿಯಲ್ಲಿ ಅವರನ್ನು ನಡೆಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ಇದಲ್ಲದೇ ಶ್ರೀಗಳು ನಿನ್ನೆ ರಾತ್ರಿಯಿಂದಲೇ ತಲೆ ಮರೆಸಿಕೊಂಡಿದ್ದರು ಎನ್ನಲಾಗಿತ್ತು, ಈ ಹಿನ್ನಲೆಯಲ್ಲಿ ಪೊಲೀಸರು ಹೆದ್ದಾರಿ ಉದ್ದಕ್ಕೂ ಅವರಿಗಾಗಿ ಕಾದುಕುಳಿತಿದ್ದರು ಎನ್ನಲಾಗಿದ್ದು, ಸದ್ಯ ಅವರನ್ನು ತಡೆದು ಹಾವೇರಿ ಪೋಲಿಸರು ಚಿತ್ರದುರ್ಗದ ಪೋಲಿಸರಿಗೆ ನೀಡಿದ್ದು, ಮುಂದಿನ ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ
ಅಂದಹಾಗೇ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಳಿಕ ತನಿಖೆ ಆರಂಭಿಸಿದ್ದಂತ ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು.