ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೇಶದ ಹಲವಾರು ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾನುವಾರ ಮತ್ತು ಸೋಮವಾರ ಗುಡುಗು ಮತ್ತು ಮಿಂಚುಗಳೊಂದಿಗೆ ಸಾಕಷ್ಟು ವ್ಯಾಪಕ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ.
ಮುಂದಿನ 5 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಇದೇ ರೀತಿಯ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳು ಮುಂದಿನ ಎರಡು ದಿನಗಳಲ್ಲಿ ವ್ಯಾಪಕ ಮಳೆಯನ್ನು ಪಡೆಯಲಿದೆ ಅಂತ ತಿಳಿಸಿದೆ. “ಆಗಸ್ಟ್ 28 ಮತ್ತು 29 ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 28 ರಂದು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.
ಆಗಸ್ಟ್ 28 ಮತ್ತು 30 ರ ನಡುವೆ ಉತ್ತರ ಒಳನಾಡಿನ ಕರ್ನಾಟಕ, ತೆಲಂಗಾಣ ಮತ್ತು ರಾಯಲಸೀಮೆಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಆಂಧ್ರಪ್ರದೇಶ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಕೇರಳ, ಮಾಹೆ ಮತ್ತು ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
o Fairly widespread/widespread light/moderate rainfall with isolated heavy falls and thunderstorm/lightning very likely over Nagaland, Manipur, Mizoram & Tripura on 28th & 29th August & 01st September and
— India Meteorological Department (@Indiametdept) August 28, 2022