ಹಾವೇರಿ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇನ್ನೂ ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಮಠದ ಶ್ರೀಗಳು ಬರುತ್ತಿದ್ದಾರೆ ಎನ್ನಲಾಗಿದೆ. ಅಂದಹಾಗೇ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಳಿಕ ತನಿಖೆ ಆರಂಭಿಸಿದ್ದಂತ ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು. ಈ ನಡುವೆ ಶ್ರೀಗಳು ತಲೆ ಮರೆಸಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬರುತ್ತಿದ್ದ ಹಾಗೇ ಶ್ರೀಗಳ ಭಕ್ತರು ಆತಂಕದಿಂದ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಬಿಗಿ ಪೋಲಿಸ್ ಬಂದೋಬಸ್ತ್ ನೀಡಲಾಗಿದೆ. ಇನ್ನು ಮಠದ ವಕೀಲರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಪ್ರಕಾರ ಅವರು ಎಲ್ಲಿಗೂ ಹೋಗಿಲ್ಲ, ಅವರು ಕೆಲವೇ ನಿಮಿಶಗಳಲ್ಲಿ ಮಠಕ್ಕೆ ಆಗಮಿಸಲಿದ್ದು, ಅವರೇ ಮಾಹಿತಿಯನ್ನು ನೀಡಲಿದ್ದಾರೆ ಎನ್ನಲಾಗಿದೆ.