ತುಮಕೂರು : ಬಾಲಕನೊಬ್ಬ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದರಿಂದ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿಕಡ್ಡಿಯಿಂದ ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
BIGG NEWS : 10 ದಿನದೊಳಗೆ ಜುಲೈ-ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ : ಸಿಎಂ ಬಸವರಾಜ ಬೊಮ್ಮಾಯಿ
ಅಂಗನವಾಡಿ ಕೇಂದ್ರಕ್ಕೆ ಹೋಗುತ್ತಿದ್ದ ಮೂರುವರೆ ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ. ಬಾಲಕನ ಗುಪ್ತಾಂಗ ಮತ್ತು ತೊಡೆಯ ಬಳಿ ಸುಟ್ಟ ಗಾಯಗಳಾಗಿವೆ.
ಈ ಬಗ್ಗೆ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಸೋಮವಾರ ಗ್ರಾಮಕ್ಕೆ ಆಗಮಿಸಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ನೋಟಿಸ್ ನೀಡಿ ತಪ್ಪೋಪ್ಪಿಗೆ ಪತ್ರ ಪಡೆದಿದ್ದಾರೆ.
BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ