ದೆಹಲಿ: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಕುರಿತು ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್(Abhijit Sen) ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಭಿಜಿತ್ ಅವರಿಗೆ 72 ವರ್ಷ ವಯಸ್ಸಾಗಿತ್ತು.
ʻನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ನಾವು ಅವರನ್ನು ಆಸ್ಪತ್ರೆಗೆ ಕರೆದೊಯ್ದವು. ಆದರೆ, ನಾವು ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರುʼಎಂದು ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ, ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರವನ್ನು ಕಲಿಸಿದರು ಮತ್ತು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳನ್ನು ಹೊಂದಿದ್ದರು.
2004 ರಿಂದ 2014 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್ ಯೋಜನಾ ಆಯೋಗದ ಸದಸ್ಯರಾಗಿದ್ದರು.
Shocking news : ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟ ಶಿಕ್ಷಕಿ!
ಥಾಣೆಯಲ್ಲಿ ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ… ಇಲ್ಲಿದೆ ಭಯಾನಕ ವಿಡಿಯೋ