ಉತ್ತರ ಪ್ರದೇಶ: ಆಗಸ್ಟ್ 23 ರ ರಾತ್ರಿ ಮಥುರಾ ರೈಲು ನಿಲ್ದಾಣದಲ್ಲಿ ತನ್ನ ತಂದೆ-ತಾಯಿಯೊಂದಿಗೆ ಮಲಗಿದ್ದ ಮಗುವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿದ್ದ. ಇದೀಗ ಆ ಮಗು ರೋಜಾಬಾದ್ನ ಬಿಜೆಪಿ ಕಾರ್ಪೊರೇಟರ್ನ ಮನೆಯಲ್ಲಿ ಪತ್ತೆಯಾಗಿದೆ.
ಕಳೆದ ವಾರ ಮಥುರಾ ರೈಲು ನಿಲ್ದಾಣದಲ್ಲಿ ಮಲಗಿದ್ದ ಏಳು ತಿಂಗಳ ಗಂಡು ಮಗುವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿದ್ದ. ಇದೀಗ ರೈಲು ನಿಲ್ದಾಣದಿಂದ 100 ಕಿ.ಮೀ ದೂರದಲ್ಲಿನ ಫಿರೋಜಾಬಾದ್ನ ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆಯಾಗಿದೆ.
ये व्यक्ति रे०स्टेशन मथुरा जं० से अपनी माँ के साथ सो रहे महज 7 माह के बच्चे को उठाकर ले गया।
इस व्यक्ति को पकड़वाने में मदद कीजिये।
आप सिर्फ Retweet कर इसके फ़ोटो/वीडियो को Groups में share कर दीजिये, विशेष कर कासगंज, बदायूँ और बरेली साइड में।
मुझे भरोसा है ये अवश्य पकड़ा जाएगा। pic.twitter.com/fTnuGbSlsi— SACHIN KAUSHIK (@upcopsachin) August 27, 2022
ಬಿಜೆಪಿಯ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಮಗು ಬೇಕು ಎಂದು ಭಯಸಿದ್ದರು. ಹೀಗಾಗಿ, ಅವರು ದೊಡ್ಡ ಗ್ಯಾಂಗ್ನ ಭಾಗವಾಗಿದ್ದ ಇಬ್ಬರು ವೈದ್ಯರಿಂದ 1.8 ಲಕ್ಷ ರೂ.ಗೆ ಈ ಮಗುವನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಒಬ್ಬಳು ಮಗಳಿದ್ದಾಳೆ.
ಇದೀಗ ಪ್ಲಾಟ್ಫಾರ್ಮ್ನಿಂದ ಮಗುವನ್ನು ಎತ್ತಿಕೊಂಡು ಹೋಗುವಾಗ ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್ ಮಾತನಾಡಿ, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಮಗುವನ್ನು ಅಪಹರಿಸಿದೆ. ಇದೀಗ, ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಭೇದಿಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ದೀಪ್ ಕುಮಾರ್ ಎಂಬ ವ್ಯಕ್ತಿ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಮಗುವನ್ನು ಕದ್ದೊಯ್ದಿದ್ದರು. ಈತ ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್ನ ಭಾಗವಾಗಿದ್ದಾರೆ. ಇದರಲ್ಲಿ ಇತರ ಕೆಲವು ಆರೋಗ್ಯ ಕಾರ್ಯಕರ್ತರು ಸಹ ಭಾಗಿಯಾಗಿದ್ದಾರೆ. ಮಗು ಈಗ ಯಾರ ಮನೆಯಲ್ಲಿದೆ ಎಂದು ನಾವು ಕಂಡುಕೊಂಡಿದ್ದು, ವಿಚಾರಣೆ ನಡೆಸಿದ್ದೇವೆ. ಕಾರ್ಪೊರೇಟರ್ಗೆ ಒಬ್ಬಳೇ ಮಗಳು ಇದ್ದಾಳೆ. ಅವರು ಗಂಡು ಮಗು ಬೇಕೆಂದು ಬಯಸಿದ್ದರು. ಹೀಗಾಗಿ, ಈ ಅಪಹರಣ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Shocking news : ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟ ಶಿಕ್ಷಕಿ!
BIGG NEWS : 10 ದಿನದೊಳಗೆ ಜುಲೈ-ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ : ಸಿಎಂ ಬಸವರಾಜ ಬೊಮ್ಮಾಯಿ
ಥಾಣೆಯಲ್ಲಿ ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ… ಇಲ್ಲಿದೆ ಭಯಾನಕ ವಿಡಿಯೋ