ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಸಂಬಂಧ ಅರ್ಜಿಗಳನ್ನು ಪರಿಶೀಲಿಸಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಕರ್ನಾಟಕ ವಕ್ಫ್ ಮಂಡಳಿ ಮೇಲ್ಮನವಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.
SHOCKING NEWS: ಯುಪಿ ರೈಲು ನಿಲ್ದಾಣದಲ್ಲಿ ಕದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ
ವಕ್ಫ್ ಮಂಡಳಿಯ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ತುರ್ತು ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಸೋಮವಾರ ಪುರಸ್ಕರಿಸಿದ ನಂತರ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಉದ್ದೇಶಿತ ಗಣೇಶ ಚತುರ್ಥಿ ಆಚರಣೆಯ ವಿರುದ್ಧ ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹಾಗೂ ನ್ಯಾಯಮೂರ್ತಿ ಎಸ್ ರವೀಂದ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠದ ಎದುರು ಆಗಸ್ಟ್ 30 ರ ಇಂದು ಅರ್ಜಿ ವಿಚಾರಣೆಗೆ ಬರಲಿದೆ. ಆಗಸ್ಟ್ 31ರಂದು ಗಣೇಶ ಹಬ್ಬ ಇರುವುದರಿಂದ ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ನ್ಯಾಯಪೀಠವು ವಿಚಾರಣೆಗೆ ಸಮ್ಮತಿಸಿದೆ.
BIGG NEWS : ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ : ಅಪಾರ ಪ್ರಮಾಣದ ಬೆಳೆ ಹಾನಿ