ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಳೆದ ರಾತ್ರಿಯಿಂದ ಹಲವು ಜಿಲ್ಲೆಗಳಲ್ಲಿ ಬಿಟ್ಟುಬಿಡದೇ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದು ಗದಗ ಜಿಲ್ಲೆಯಲ್ಲಿ ಇಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೊಪ್ಪಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. , ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐರಿಂದ ಆದೇಶ ಹೊರಡಿಸಲಾಗಿದೆ.
ವಿಜಯನಗರ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ವಿಜಯನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುಂಜಾಗ್ರತ ಕ್ರಮವಾಗಿ ಇಂದು ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
BIGG NEWS : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ : ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ