ಕಲಬುರಗಿ : ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಉಪ ವಿಭಾಗಗಳಾದ ಕಲಬುರಗಿ ಗ್ರಾಮೀಣ, ಆಳಂದ, ಕಡಗಂಚಿ, ಅಫಜಲಪೂರ, ಚೌಡಾಪೂರ ಹಾಗೂ ಕಮಲಾಪೂರ ಶಾಖೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಗ್ರಾಹಕರಿಗೆ ಗೃಹ ಬಳಕೆಗೆ ಮಾಸಿಕ 75 ಯೂನಿಟ್ಗಳವರೆಗೆ ರಾಜ್ಯ ಸರ್ಕಾರದಿಂದ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1 ಕಾರ್ಯನಿರ್ವಾಹಕ ಅಭಿಯಂತರರು (ವಿ) ಅವರು ತಿಳಿಸಿದ್ದಾರೆ.
BIG NEWS: 2021 ರಲ್ಲಿ ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು 15.3% ಹೆಚ್ಚಾಗಿದೆ: NCRB ವರದಿ
ಈ ಯೋಜನೆಯಡಿ ಸೌಲಭ್ಯ ಪಡೆಯಲು ಗ್ರಾಹಕರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣಪತ್ರ (ಆರ್ಡಿ ಸಂಖ್ಯೆ ಸಹಿತ), ಬಿ.ಪಿ.ಎಲ್ ರೇಷನ್ ಕಾರ್ಡ್ (ಆರ್.ಸಿ ಸಂಖ್ಯೆ ಸಹಿತ) ಹೊಂದಿರಬೇಕು. ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರಬೇಕು.
ಅರ್ಹ ವಿದ್ಯುತ್ ಗ್ರಾಹಕರು ಏಪ್ರಿಲ್ 30ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಬೇಕು. ಸರ್ಕಾರದ ಆದೇಶದಂತೆ ಮಾಸಿಕ ಬಳಕೆಯು 250 ಯೂನಿಟ್ಗಳಿಗಿಂತ ಹೆಚ್ಚಾಗಿದ್ದಲ್ಲಿ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ಅರ್ಹ ಗ್ರಾಹಕರು ಸುವಿಧಾ ತಂತ್ರಾಂಶದಲ್ಲಿ https://suvidha.karnataka.gov.in ಆನ್ಲೈನ್ ಮೂಲಕ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.