ಮಡಿಕೇರಿ : ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಅವರ ಉದ್ಯೋಗ ಸೃಜನ(ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ವಾಹನ ಸವಾರರ ಗಮನಕ್ಕೆ : ಆಗುಂಬೆ ಘಾಟ್ ನಲ್ಲಿ ‘ಭಾರೀ ವಾಹನ ಸಂಚಾರ ನಿಷೇಧ’
ಸ್ವ ಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುತ್ತದೆ. ಈ ವರ್ಷದಲ್ಲಿ ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಮೀನು ಸಾಕಾಣಿಕೆ ಹಾಗೂ ಮಾಂಸಹಾರಿ ಹೋಟೆಲ್ ಮತ್ತು ಇತರೆ 250 ಕ್ಕೂ ಅಧಿಕ ಉದ್ದಿಮೆಗಳಿಗೆ ಸಹಾಯಧ ನೀಡಲಾಗುತ್ತದೆ.
BIGG NEWS : ರಾಜ್ಯದಲ್ಲಿ ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ
ಈ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ www.kvic.org.in (ಪಿಎಂಇಜಿಪಿ ಆನ್ಲೈನ್ ಅಪ್ಲಿಕೇಶನ್) ನಲ್ಲಿ ಅರ್ಜಿ ಸಲ್ಲಿಸುವಾಗ (ಏಜೆನ್ಸಿ ಕೋಡ್ ಕೆವಿಐಬಿ) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ 2 ಪ್ರತಿ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಕಚೇರಿ ಭೇಟಿ ನೀಡಿದಲ್ಲಿ ಉಚಿತವಾಗಿ ಆನ್ಲೈನ್ ಅರ್ಜಿ ಹಾಕಿಕೊಡಲಾಗುವುದು. ಹೆಚ್ಚಿನ ವಿವರಗಳಿಗೆ ಎಚ್.ಆರ್.ರಾಮಕೃಷ್ಣ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಕೊಡಗು ಜಿಲ್ಲೆ ಇವರ ಕಚೇರಿ ದೂ.ಸಂ.08272-225946, 9480825630 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎಚ್.ಆರ್.ರಾಮಕೃಷ್ಣ ಅವರು ತಿಳಿಸಿದ್ದಾರೆ.