ಕೋಲ್ಕತ್ತಾ: ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ(Mamata Banerjee) ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಗೆ ಇಂದು ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಭಿಷೇಕ್ ಬ್ಯಾನರ್ಜಿಯರನ್ನು ಶುಕ್ರವಾರ(ಸೆ.2) ಬೆಳಿಗ್ಗೆ ಕೋಲ್ಕತ್ತಾದ ಇಡಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
“ನಮ್ಮ ಅಧಿಕಾರಿಗಳ ಮುಂದೆ ಹಾಜರಾಗುವಂತೆ ನಾವು ಅಭಿಷೇಕ್ ಬ್ಯಾನರ್ಜಿಗೆ ಸಮನ್ಸ್ ನೀಡಿದ್ದೇವೆ. ನವದೆಹಲಿಯಿಂದ ನಮ್ಮ ಅಧಿಕಾರಿಗಳು ಅವರನ್ನು ವಿಚಾರಣೆ ಮಾಡಲು ಬರುತ್ತಾರೆ” ಎಂದು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
BIGG NEWS : ಶಿಕ್ಷಣ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ : ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೋಟಿಸ್ ಜಾರಿ
BIG NEWS: ʻಪತಿಯ ಕಚೇರಿಗೆ ಪತ್ನಿ ಹೋಗಿ ನಿಂದಿಸುವುದು ಕ್ರೌರ್ಯಕ್ಕೆ ಸಮಾನʼ: ಛತ್ತೀಸ್ಗಢ ಹೈಕೋರ್ಟ್
BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು