ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ದಾಖಲಾಗಿರುವಂತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ, ಇದೀಗ ಪೊಲೀಸರು ಸಂತ್ರಸ್ತ ಬಾಲಕಿಯರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಅವರ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ಇದೀಗ ದಾಖಲಿಸಿಕೊಳ್ಳುವಂತ ಪ್ರಕ್ರಿಯೆ ಆರಂಭಗೊಂಡಿದೆ.
ಚಿತ್ರದುರ್ಗದ ಒಂದನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶರ ಮುಂದೆ, ಮುರುಘಾ ಶ್ರೀಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದಂತ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ.
ನ್ಯಾಯಾಧೀಶರ ಮುಂದೆ ಹಾಜರಾಗಿರುವಂತ ಸಂತ್ರಸ್ತ ಬಾಲಕಿಯರಿಂದ, ಪ್ರಕರಣ ಸಂಬಂಧ ಸೆಕ್ಷನ್ 164ರಡಿಯಲ್ಲಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ.
ಮತ್ತೊಂದೆಡೆ ಚಿತ್ರದುರ್ಗ ನಗರದ ಡಿಸಿ ಕಚೇರಿಯ ಮುಂದೆ ಮುರುಘಾ ಶ್ರೀ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಬೀದಿಗಿಳಿದಿವೆ. ವಿವಿಧ ದಲಿತಪರ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮುರುಘಾ ಶರಣರನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.