ಮಂಗಳೂರು: ಜಿಲ್ಲೆಯ ರೈಲಿನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.
BIGG NEWS: ದಶಪಥ ರಸ್ತೆಗೆ ಪ್ಲ್ಯಾನಿಂಗ್ ಕೊಟ್ಟವರಿಗೆ ಪದ್ಮಭೂಷಣ ಕೊಡಬೇಕು- ಡಿ.ಕೆ ಶಿವಕುಮಾರ್
ಕಾರವಾದ ಮೂಲದ ಶಿಕ್ಷಕ ರಮೇಶ್ ಮತ್ತು ನಿರ್ಮಲಾ ದಂಪತಿ ರೈಲಿನಲ್ಲಿ ರಾತ್ರಿ ಕಾರವಾರಕ್ಕೆ ರೈಲಿನಲ್ಲಿ ಹೊರಟಿದ್ದರು.ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾನೆ. ನಂತರ ಆತ ರೈಲಿನಿಂದ ಹಾರಲು ಯತ್ನಿಸಿದ್ದಾನೆ. ಕೂಡಲೇ ಮಹಿಳೆ ತುರ್ತು ಸಂದರ್ಭ ರೈಲು ನಿಲ್ಲಿಸುವ ಚೈನ್ ಎಳೆದಿದ್ದಾರೆ. ಅದರಂತೆ ರೈಲಿನ ವೇಗ ತಗ್ಗಿದಾಗ ಅಪರಿಚಿತ ನಿರ್ಮಲಾರಿಂದ ಬಿಡಿಸಿಕೊಂಡು ರೈಲಿನಿಂದ ಹಾರಿದ್ದಾನೆ.
ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.