ಶಿವಮೊಗ್ಗ: ಜಿಲ್ಲೆಯ ಕೊಮ್ಮನಾಳು ಗ್ರಾಮದ ಸುತ್ತಮುತ್ತಲಿನ ಭಾಗದ ಜನರಿಗೆ ನಿದ್ದೆಗೆಡಿಸಿ, ಆತಂಕ ಸೃಷ್ಟಿಸಿದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಇತ್ತೀಚೆಗೆ ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡು ಗ್ರಾಮಸ್ಥರ ನಿದ್ದೆ ಕೆಡಿಸಿತ್ತು. ಕಳೆದ ಹಲವು ದಿನಗಳಿಂದ ಆಲದಹಳ್ಳಿ, ಸೋಮಿನಕೊಪ್ಪ ಗ್ರಾಮಗಳಲ್ಲಿ ಚಿರತೆ ಓಡಾಡುತ್ತಿತ್ತು. ಇದರಿಂದ ಗ್ರಾಮಸ್ಥರಿಗೆ ಭಯ ಉಂಟಾಗಿತ್ತು. ಹೀಗಾಗಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮಾಡಿದ್ದರು. ಗ್ರಾಮದಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆ ಸಿಕ್ಕಿದೆ. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರುಬಿಟ್ಟ ಹಾಗೆ ಆಗಿದೆ.