ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಅರ್ಜಿಯ ವಾದ ವಿವಾದ ಆಲಿಸಿದ ಸುಪ್ರೀಂಕೋರ್ಟ್ ಸಧ್ಯ ಮಹತ್ವದ ಆದೇಶ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ, ವಕ್ಫೋ ಬೋರ್ಡ್ ಸುಪ್ರೀಂಕೋರ್ಟ್ʼಗೆ ಅರ್ಜಿ ಸಲ್ಲಿಸಿತ್ತು. ಸಧ್ಯ ಈ ಅರ್ಜಿಯ ವಿಚಾರಣೆ ನಡೆಸಿದ ತ್ರಿಸದಸ್ಯ ನ್ಯಾಯಪೀಠ, ವಾದ-ಪ್ರತಿವಾದ ಆಲಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಈ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲದಂತಾಗಿದೆ.
ಅಂದ್ಹಾಗೆ, ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡದಂತೆ ಮುಸ್ಲಿಂ ಸಂಘಟನೆಯ ಮನವಿಯನ್ನ ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಈ ಹಿಂದೆ ಈ ಸ್ಥಳದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಲು ಅನುಮತಿ ನೀಡಿತ್ತು.