ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.
Ganesh Chaturthi: ಗಣೇಶ ಚತುರ್ಥಿಯಂದು ಚಂದ್ರನನ್ನು ಏಕೆ ನೋಡಬಾರದು ಗೊತ್ತಾ? ಇಲ್ಲಿದೆ ಮಾಹಿತಿ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, 274 ಅರ್ಧ ಮನೆ ಹಾನಿಯಾಗಿವೆ. ನಿನ್ನೆ ಒಂದೇ ದಿನದಲ್ಲಿ 148 ಮನೆಗಳು ಹಾನಿಯಾಗಿದ್ದು, 258 ಜಾನುವಾರುಗಳು ಸಾವನ್ನಪ್ಪಿವೆ ಎಂದು ಹೇಳಿದರು.
ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡ್ತಿದ್ದಾರೆ. ಮಳೆಯಿಂದ ಮನೆಗಳಿಗೆ ಹಾನಿಯಾದರೆ ತಕ್ಷಣ ಪರಿಹಾರ ನೀಡಲಾಗುತ್ತದೆ. ಎಂದು ಮಾಹಿತಿ ನೀಡಿದ್ದಾರೆ.
ಬ್ರಿಟೀಷರಿದ್ದಾಗ ಗಣೇಶೋತ್ಸವಕ್ಕೆ ಅಡ್ಡಿಯಿರಲಿಲ್ಲ, ಈಗ ಪರದಾಡುವಂತೆ ಆಗಿದೆ – ಪ್ರಮೋದ್ ಮುತಾಲಿಕ್