ಹೊಸಪೇಟೆ : ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿರುದ್ಧ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ. ಪೋಲಪ್ಪ ಎಂಬುವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ವಿರುದ್ಧ ವಿಜಯನಗರ ಜಿಲ್ಲೆಯ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿ.ಪೋಲಪ್ಪ ಅವರು ದೂರು ನೀಡಿದ್ದು, ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಡಿ.ಪೋಲಪ್ಪ ಎಂಬುವರಿಗೆ ಆನಂದ್ ಸಿಂಗ್ ಅವಾಚ್ಯ ಶಬ್ದಗಳಿಂದ ಜಾತಿ ಬಗ್ಗೆ ನಿಂದಿಸಿ ಮನೆಗೆ ಬೆಂಕಿ ಹಾಕಿ ಸುಡ್ತೀನಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಡಿ.ಪೋಲಪ್ಪ ಕುಟುಂಬಸ್ಥರು ವಿಜಯನಗರ ಎಸ್ ಪಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಹೀಗಾಗಿ ಆನಂದ್ ಸಿಂಗ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.