ಹುಬ್ಬಳ್ಳಿ: ನಗರದಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ನೀಡಿದ್ದಂತ ಅನುಮತಿ ಪ್ರಶ್ನಿಸಿ, ಅಂಜುಮಾನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದಂತ ಆಕ್ಷೇಪಣೆಯನ್ನು ವಜಾಗೊಳಿಸಿರುವಂತ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಈದ್ಗಾ ಮೈದಾನದಲ್ಲಿ ಈ ವರ್ಷ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತೆ ಆಗಿದೆ.
ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಅಂಜುಮಾನ್ ಇಸ್ಲಾಂ ಸಂಸ್ಥೆಯಿಂದ ಗಣೇಶೋತ್ಸವ ಅನುಮತಿಗಾಗಿ ರಚಿಸಿದ್ದಂತ ಸಮಿತಿಯ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಗಣೇಶೋತ್ಸವ ಕೂರಿಸವು ಬಗ್ಗೆ ನಿರ್ಧಿರಸೋ ಅಧಿಕಾರ ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಿಗೆ ಇದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
ಅಂದಹಾಗೇ ನಿನ್ನೆ ಹುಬ್ಬಳ್ಳಿ – ಧಾರವಾಡ ಪಾಲಿಕೆಯಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಮೂರು ದಿನಗಳಿಗೆ ಕೂರಿಸೋದಕ್ಕೆ ಅವಕಾಶ ನೀಡಲಾಗಿತ್ತು. ಹೀಗೆ ಅವಕಾಶ ನೀಡೋ ಮುನ್ನಾ, ಐವರು ಸದಸ್ಯರ ಸದನ ಸಮಿತಿಯನ್ನು ಪಾಲಿಕೆ ಆಯುಕ್ತರು ರಚಿಸಿದ್ದರು. ಈ ಸದನ ಸಮಿತಿಯು ನೀಡಿದಂತ ಶಿಫಾರಸ್ಸಿನ ಆಧಾರದ ಮೇಲೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸೋದಕ್ಕೆ ಅವಕಾಶ ನೀಡಲಾಗಿತ್ತು.
ಆದ್ರೇ.. ಪಾಲಿಕೆಯಿಂದ ಅನುಮತಿಸಲಾಗಿದ್ದಂತ ಗಣೇಶೋತ್ಸವದ ಬಗ್ಗೆ ಹುಬ್ಬಳ್ಳಿಯ ಅಂಜುಮಾನ್ ಇಸ್ಲಾಂ ಸಂಸ್ಥೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಈ ಕುರಿತಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ಪಾಲಿಕೆ ನಿರ್ಧಾರ ಸರಿಯಾಗಿದೆ ಎಂಬುದಾಗಿ ಅಭಿಪ್ರಾಯ ಪಟ್ಟು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.