ಬೆಂಗಳೂರು : ವಾಲ್ಮೀಕಿ ಸಮುದಾಯಕ್ಕೆ ಆದಷ್ಟು ಶೀಘ್ರ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
BIGG NEWS : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ `ಗಣೇಶೋತ್ಸವ’ಕ್ಕೆ ಹೈಕೋರ್ಟ್ ಅಸ್ತು
ಈ ಕುರಿತು ಟ್ವೀಟ್ ಮಾಡಿರುವ ಅವರು, ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.
ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿರುವ ವರದಿ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ. ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ ಎಂದು ಹೇಳಿದ್ದಾರೆ.