ಬೆಂಗಳೂರು : ವಸತಿ ರಹಿತರಿಗೆ ವಸತಿ ಸಚಿವ ವಿ.ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ನಿರ್ಮಿಸಿರುವ 1 ಲಕ್ಷ ಮನೆಗಳ ಪೈಕಿ ಎರಡು ಸಾವಿರ ಮನೆಗಳನ್ನು ಸೆ.7 ರಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಿ : ಸಿಎಂ ಬಸವರಾಜ ಬೊಮ್ಮಾಯಿ ಕರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ವಸತಿ ಯೋಜನೆಯಡಿ 2 ಸಾವಿರ ಮನೆಗಳು ಪೂರ್ಣಗೊಂಡಿದ್ದು, ಸೆ. 7 ರಂದು ಸಾಂಕೇತಿಕವಾಗಿ ಹಸ್ತಾಂತರ ಮಾಡಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ ಎಂದರು.
ಗುತ್ತಿಗೆದಾರರಿಂದ 493 ಎಕರೆ ಜಮೀನನ್ನು ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಆಗಿದ್ದ ವೇಳೆ ಹಸ್ತಾಂತರಿಸಲಾಗಿದೆ. 48 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರಲ್ಲಿ 46 ಸಾವಿರ ಮನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. 10 ಸಾವಿರ ಮನೆಗಳು ಚಾವಣಿ ಹಂತದಲ್ಲಿವೆ. 13,500 ಲಿಂಟ್ಸ್ ಹಂತದಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.
Farmer suicide case 2021 : ರೈತರ ಆತ್ಮಹತ್ಯೆ : ದೇಶದಲ್ಲೇ `ಕರ್ನಾಟಕ’ಕ್ಕೆ ಎರಡನೇ ಸ್ಥಾನ!