ದಕ್ಷಿಣಕನ್ನಡ : ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಠಿ ಮಾಡೋದಕ್ಕೆ ಕೆಲವು ವಾಟ್ಸಪ್ ಗ್ರೂಪ್ಗಳ ಮೂಲಕ ಪೋಸ್ಟ್ ಹಂಚಿಕೆ ಮಾಡಲು ಯತ್ನಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಎರಡು ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಸಂಶಯ ಮೂಡಿಸಿದ್ರೆ ಅಪರಾಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ .