ಮಂಗಳೂರು: ಸೆ. 2 ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಈಗಾಗಲೇ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಂತ್ರಿ ಸುಗಮ ಸಂಚಾರ ಹಾಗೂ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ವಾಹನ ಸಂಚಾರ ಬದಲಾವಣೆಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
BIGG NEWS: Snap ಉದ್ಯೋಗಿಗಳಿಗೆ ಶಾಕ್ ; 1,300 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಪ್ಲ್ಯಾನ್
ಕೆಳಗಿನಂತಿವೆ ಮಾಹಿತಿ
* ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು- ಮರವೂರು- ಮಜಕಡ-ಕಾವೂರು- ಬೊದೇಲ್- ಪದವಿನಂಗಡಿ- ಯೆಯ್ಯಾಡಿ- ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕೆಲ ಕಡೆ ಬೆಳಗ್ಗೆ ೬ ಗಂಟೆಯಿಂದ ಸಂಜೆ ೬ ತನಕ ನಿಷೇಧಿಸಲಾಗಿದೆ.
*ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನ ಸುತ್ತಮುತ್ತ ೫೦೦ ಮೀಟರ್ ವ್ಯಾಪ್ತಿಯ ರಸ್ತೆಗಳಲ್ಲಿ ಮುಂಜಾನೆ ೬ ಗಂಟೆಯಿಂದ ಸಂಜೆ ೫ ತನಕ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
* ಬಂಗ್ರ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸುವ ಗಣ್ಯರಿಗೆ ಮಾತ್ರ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ.