ತುಮಕೂರು: ಈಗಾಗಲೇ ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ( Congress Party ) ಗುಡ್ ಬೈ ಹೇಳಿ, ಹೊರ ನಡೆಯುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎನ್ನುವಂತೆ, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ( MD Lakshminarayana ) ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆಸಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದಂತ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೂ ಗುಡ್ ಬೈ ಹೇಳುತ್ತಿರೋದಾಗಿ ಘೋಷಣೆ ಮಾಡಿದರು.
BIGG NEWS : ದೇಶಾದ್ಯಂತ ಏಕರೂಪದಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ|Board Exams
ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸರವಾಗಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ಅವರಿಗೆ ಕಳುಹಿಸಿದ್ದೇನೆ. ಮುಂದೆ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದರು.