ಮಂಗಳೂರು: ಸೆ. 2 ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಈಗಾಗಲೇ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಅಲ್ಲಿನ ಜನರನ್ನ ಬಲವಂತವಾಗಿ ಆಹ್ವಾನಿಸಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಗಂಭೀರ ಆರೋಪ ಮಾಡಿದ್ದಾರೆ.
BIGG NEWS: ಸೆ. 2 ರಂದು ಕರಾವಳಿಗೆ ಪ್ರಧಾನಿ ಆಗಮನ; ವಾಹನ ಸಂಚಾರದಲ್ಲಿ ಬದಲಾವಣೆ! ಇಲ್ಲಿದೆ ಮಾಹಿತಿ
ನಗರದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಇಲ್ವಾ ಎನ್ನುವ ಪ್ರಶ್ನೆ ಕಾಡತೊಡಗಿದೆ. ಮೈದಾನಕ್ಕಿಂತ ದೊಡ್ಡ ಜಾಗ ಬೇಕು ಅಂತಾ ಕಾಣಿಸುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಪಿಡಿಒಗಳಿಗೆ ನೋಟಿಸ್ ಕಳುಹಿಸಲಾಗಿದೆ. ಪ್ರತಿ ಗ್ರಾಮದಿಂದ 250 ಜನರನ್ನು ಕರೆತರಲು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ಹೇಳಿದ್ದಾರೆ.
ಇನ್ನು ಕಂದಾಯ ಇಲಾಖೆಯಿಂದ ವಿಎ ಸೇರಿದಂತೆ ಎಲ್ಲಾ ಅಧಿಕಾರಿಗಳು ಬರಬೇಕು ಅಂತಾ ಸೂಚನೆ ನೀಡಲಾಗಿದೆ. ಗ್ರಾಪಂ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವನಿಗೂ ನೋಟಿಸ್ ಹೋಗಿದೆ. ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಎಲ್ಲಾ ಮಕ್ಕಳೂ ಕಾರ್ಯಕ್ರಮದಲ್ಲಿ ಬರಬೇಕು ಎಂದು ಹೇಳಿದ್ದಾರೆ.