ಬೆಂಗಳೂರು : ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG BREAKING NEWS : ಮುರುಘಾಮಠದ ಶ್ರೀಗೆ ಮತ್ತೊಂದು ಬಿಗ್ ಶಾಕ್, ಸುಮೋಟೋ ಕೇಸ್ ದಾಖಲು
ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ: ʻಗಣೇಶ ಮೂರ್ತಿʼಗೆ ಆರತಿ ಬೆಳಗಿದ ನಮೋ… Watch Video