ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ದಿ: 15/09/2022ರವರೆಗೆ ವಿಸ್ತರಿಸಲಾಗಿದೆ.
ನೇರ ಸಾಲ, ಉದ್ಯಮಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೊ ಕ್ರೆಡಿಟ್ ಯೋಜನೆ, ಭೂ ಒಡೆತನ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಆನ್ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-276776 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.