ಚಿತ್ರದುರ್ಗ : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಸೆ. 7 ರೊಳಗೆ ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಿ
ಮುರುಘಾಮಠದ ಶ್ರೀಗಳ ಬಂಧನದ ಕುರಿತು ಪ್ರತಿಕ್ರಿಯೆ ನೀಡಿರುವ ಮಠದ ಪರ ವಕೀಲ ಉಮೇಶ್, ಮುರುಘಾಮಠದ ಶ್ರೀಗಳನ್ನು ಬಂಧಿಸಿಲ್ಲ. ಶ್ರೀಗಳು ಕಾನೂನಿಗೆ ಗೌರವ ನೀಡಿ ಶರಣಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಲಿದ್ದಾರೆ. ಮಹಿಳಾ ವಾರ್ಡನ್ ಹೇಳಕೆ ಆಧಾರದ ಮೇಲೆ ಬಂಧನ ಆಗಿಲ್ಲ ಎಂದು ಮಠದ ಪರ ವಕೀಲ ಉಮೇಶ್ ಪತ್ರಿಕ್ರಿಯೆ ನೀಡಿದ್ದಾರೆ.
ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ʻಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ವ್ಯಕ್ತಪಡಿಸುತ್ತದೆʼ: ಮುಂಬೈ ವಿಶೇಷ ನ್ಯಾಯಾಲಯ