ಬೆಂಗಳೂರು : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
ಬಟ್ಟೆ ಅಂಗಡಿಯೊಳಗೆ ಕಾದು ಕುಳಿತಿದ್ದ ಹಂತಕರು… ಗುರಗಾಂವ್ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆಗೈದು ಎಸ್ಕೇಪ್
ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಬಂಧನದ ಕುರಿತಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ.ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಹೇಳಿದ್ದಾರೆ.
ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.