ಬೆಂಗಳೂರು : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
ನಿನ್ನೆ ತಡರಾತ್ರಿ ಜೈಲಿಗೆ ಕರೆದುಕೊಂಡು ಹೋದ ಬಳಿಕ ತಮ್ಮಕಾರ್ಯಾಗ್ರಹದ ಸಿಬ್ಬಂದಿಗೆ ಎದೆನೋವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಮುರುಘಾಮಠದ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾಸ್ಪತ್ರೆಯ ಮೂವರು ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಬಳಿಕ ಇಸಿಜಿ ಟೆಸ್ಟ್ ಮಾಡಲಾಗಿದೆ. ಇಸಿಜಿ ಟೆಸ್ಟ್ಮಾಡಿದ ಬಳಿಕ ಹೈಬಿಪಿ ಇರೋದ್ರಿಂದ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡುವ ಸಾಧ್ಯತೆಯಿದೆ.
ರಾತ್ರಿಪೂರ್ತಿ ನಿದ್ದೆ ಮಾಡದ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.