ಚಿತ್ರದುರ್ಗ : ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಸಾಲಿ ಮಂಜಪ್ಪ ಮಧ್ಯಮಗಳೊಂದಿಗೆ ಮಾತನಾಡಿ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಸಮಸ್ಯೆ ಯಾವುದೇ ಸಮಸ್ಯೆಯಿಲ್ಲಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
ನಿನ್ನೆ ತಡರಾತ್ರಿ ಜೈಲಿಗೆ ಕರೆದುಕೊಂಡು ಹೋದ ಬಳಿಕ ತಮ್ಮಕಾರ್ಯಾಗ್ರಹದ ಸಿಬ್ಬಂದಿಗೆ ಎದೆನೋವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಮುರುಘಾಮಠದ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ತಪಾಸಣೆ ಮಾಡಲಾಗುತ್ತಿದೆ.
ಜಿಲ್ಲಾಸ್ಪತ್ರೆಯ ಮೂವರು ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಬಳಿಕ ಇಸಿಜಿ ಟೆಸ್ಟ್ ಮಾಡಲಾಗಿದೆ. ಇಸಿಜಿ ಟೆಸ್ಟ್ ಮಾಡಿದ್ದೇವೆ ̤ ಮುರುಘಾ ಶ್ರೀಗಳು ಒತ್ತಡಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಎಲ್ಲಾ ನಾರ್ಮಲ್ ಇದೆ . ಎದೆನೋವು ಕಾಣಿಸಿಕೊಂಡ ಕಾರಣ ಕಾರ್ಡಿಯಾಲಜಿಸ್ಟ್ ಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಸಾಲಿ ಮಂಜಪ್ಪ ಪ್ರತಿಕ್ರಿಯೆ ನೀಡಿದ್ದಾರೆ