ದಕ್ಷಿಣಕನ್ನಡ : ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯನ್ನು ರಾಜ್ಯದ ನಾಯಕರಾದ ರಾಜ್ಯಪಾಲ ಗೆಹಲೋತ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂಪ್ಪ ಸೇರಿದಂತೆ ಸ್ವಾಗತಿಸಿದ್ದಾರೆ.
ವೇದಿಕೆಯ ಮುಂಭಾಗದಲ್ಲಿ ಕಾರ್ಯಕರ್ತರಿಂದ ಮೋದಿ ಮೋದಿ ಎಂದು ಕೇಸರಿ ಶಾಲು ಬೀಸಿ ಘೋಷಣೆ ಕೂಗುತ್ತಿದ್ದಾರೆ. ನಾನಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸುಮಾರು 3,800 ಕೋಟಿ ರೂಪಾಯಿಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಭದ್ರತೆಗೆ 2,000 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಕೆಎಸ್ಆರ್ಪಿ, ಎಎನ್ಎಫ್, ಸಿಎಐಆರ್, ಡಿಐಆರ್, ಆರ್ ಎಎಫ್, ಗರುಡ ಪಡೆ ಸೇರಿದಂತೆ ಒಟ್ಟಾರೆ 3,000ದಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಯಾವ ಲೋಪ ಆಗದಂತೆ ವ್ಯವಸ್ಥೆ ಮಾಡಲಾಗಿದೆ.